ಚೆನ್ನೈ: ನಿನ್ನೆ ಸಂಜೆ ತೀವ್ರ ಹೃದಯಾಘಾತಕ್ಕೆ ಒಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಇಂದು ಮುಂಜಾನೆ ಆ್ಯಂಜಿಯೋಗ್ರಾಮ್ ಪರೀಕ್ಷೆಗೆ ಒಳಪಡಿಸಲಾಗಿದೆ.
‘ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಜಯಲಲಿತಾ ಅವರು ಸಂಜೆ ವೇಳೆಗೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಹೃದ್ರೋಗ ಮತ್ತು ಉಸಿರಾಟ ವಿಭಾಗಗಳ ಪರಿಣತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ’ ಎಂದು ಆಸ್ಪತ್ರೆ ಹೇಳಿಕೆ ನೀಡಿತ್ತು.
ನಮ್ಮ ಕೈಲಾದ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ರಾಜ್ಯದ ಗಡಿಭಾಗದಲ್ಲಿ ಬಿಗಿ ಭದ್ರತೆ
ರಾಜ್ಯದ ಗಡಿಭಾಗಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದ್ದು, ಕರ್ನಾಟಕ -ತಮಿಳುನಾಡು ನಡುವಿನ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ಮಧ್ಯಾಹ್ನ 12.30ಕ್ಕೆ ಎಐಎಡಿಎಂಕೆ ಸಭೆ
ಜಯಲಲಿತಾ ಅವರು ಗುಣಮುಖರಾಗಲಿ ಎಂದು ಇಡೀ ರಾಜ್ಯದ ಜನತೆ ಪ್ರಾರ್ಥಿಸುತ್ತಿದೆ. ಮಧ್ಯಾಹ್ನ ಎಐಎಡಿಎಂಕೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಶಾಸಕರ ಸಭೆ ನಡೆಯಲಿದೆ.
ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.
ಆಸ್ಪತ್ರೆ ಸಿಒಒ ವಿಶ್ವನಾಥನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡು ಸಿಎಂ ಅವರ ಆರೋಗ್ಯದ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಎಐಎಡಿಎಂಕೆ ಸಹ ಹೇಳಿಕೆ ಬಿಡುಗಡೆ ಮಾಡಿದ್ದು ಮೆಡಿಕಲ್ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು)ನಲ್ಲಿ ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ.
ತಮಿಳುನಾಡಿನಾದ್ಯಂತ ಹೈ ಅಲರ್ಟ್
ಜಯಾ ಬಗ್ಗೆ ಆಸ್ಪತ್ರೆ ವೈದ್ಯರಿಂದ ಸ್ಪಷ್ಟ ಮಾಹಿತಿ ರಾಜ್ಯಪಾಲರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ಇನ್ನೊಂದೆಡೆ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಮುಂದುವರೆದಿದೆಮ ನಿಷೇಧಾಜ್ಞೆಯ ಹೊರತೂ, ಜನರು ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ 9 ಅರೆಸೇನಾ ತುಕಡಿಗಳನ್ನು ಸನ್ನದ್ಧಗೊಳಿಸಲಾಗಿದೆ. ಅಗತ್ಯ ಬಿದ್ದರೆ ವಿಮಾನದ ಮೂಲಕ ಅವುಗಳನ್ನು ರವಾನಿಸುವ ಯೋಜನೆ ಇದೆ.
ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ಕೆಎಸ್’ಆರ್’ಟಿಸಿ ಬಸ್ಸು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
Comments are closed.