ಕರಾವಳಿ

ಕಾಂಗ್ರೆಸ್ ಭದ್ರಕೋಟೆ ಬಂಟ್ವಾಳದಲ್ಲಿ ಬಿಜೆಪಿ ಜಯಭೇರಿ : ರಮಾನಾಥ್ ರೈ‌ಗೆ ಮುಖಭಂಗ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಭಾರಿಸಿದ್ದಾರೆ.

ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಇಲ್ಲಿ ಜಯಗಳಿಸುವ ಮೂಲಕ ಜಿಲ್ಲೆಯ ಪ್ರಭಾವಿ ರಾಜಕಾರಣಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರಿಗೆ ಮುಖಭಂಗವಾಗಿದೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ 29720 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರಿಗೆ 21179 ಮತ ಮಾತ್ರ ಲಭಿಸಿದ್ದು, ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ರಾಜೇಶ್ ನಾಯಕ್ ಗೆಲುವು ಸಾಧಿಸಿದ್ದಾರೆ.

Comments are closed.