ಕರಾವಳಿ

ಬೆಳ್ತಂಗಡಿಯಲ್ಲೂ ಬಿಜೆಪಿ ಗೆಲುವು : ದ.ಕ.ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು – ಕಾಂಗ್ರೆಸ್ ಒಂದು ಕ್ಷೇತ್ರಕ್ಕೆ ತೃಪ್ತಿ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕೂಡ ಈ ಬಾರಿ ಬಿಜೆಪಿ ಪಾಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಏಳು ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭಾರೀ ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಹರೀಶ್ ಪೂಂಜಾ ಅವರು 11 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ವಸಂತ್ ಬಂಗೇರಾ ಪರಾಭವಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಎಂಟು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಎಂಟರಲ್ಲಿ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಒಂದು ಕ್ಷೇತ್ರದಲ್ಲಿ ಮಾತ್ರ (ಉಳ್ಳಾಲ) ಕಾಂಗ್ರೆಸ್ ತನ್ನ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Comments are closed.