ಉಡುಪಿ: ಮಣಿಪಾಲ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ CEN ಅಪರಾಧ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಕುಶಿನಗರ ಜಿಲ್ಲೆಯ ತೀಶ್ ಕುಮಾರ್ ಚೌರಾಸಿಯಾ(23) ಬಂದಿತ ಆರೋಪಿಯಾಗಿದ್ದು ಆತನಿಂದ 42,500 ಸಾವಿರ ಅಂದಾಜು ಮೌಲ್ಯದ 2 ಕಿಲೋ, 142 ಗ್ರಾಂ ತೂಕದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈತನು ಮಣಿಪಾಲ MIT ಯಲ್ಲಿ 2013 ರಿಂದ ICAS ವಿದ್ಯಾಭ್ಯಾಸ ಮಾಡುತ್ತಿದ್ದು ಅನುತ್ತೀರ್ಣನಾಗಿರುವ ಬಗ್ಗೆ ತಿಳಿದು ಬಂದಿರುತ್ತದೆ.
ಉಡುಪಿ ತಾಲೂಕು ಹೆರ್ಗ ಗ್ರಾಮದ ಮಣಿಪಾಲ ಈಶ್ವರ ನಗರ 2 ನೇ ಮುಖ್ಯ ರಸ್ತೆಯ ರೀಗಲ್ ಹಿಲ್ಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ನಿಂತಿದ್ದ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ವರ್ತಮಾನದ ಮೇರೆಗೆ ಈ ದಾಳಿ ನಡೆಸಿ ಗಾಂಜಾ ಸಮೇತ ಆರೋಪಿ ಸತೀಶನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿದ್ದು ಜೂ.6 ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿರುತ್ತಾನೆ. ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ…..
ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ ನಿಂಬರ್ಗಿ, ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಇವರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ CEN ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ, ಜೊತೆಗೆ ಶ್ರೀ ಕೇಶವ ಗೌಡ, ಎಎಸ್ಐ, ಹೆಚ್ ಸಿ ಗಳಾದ ಸತೀಶ್, ಕೃಷ್ಣಪ್ರಸಾದ್, ಪ್ರಸನ್ನ ಸಾಲ್ಯಾನ್, ನಾಗೇಶ್ ರವರು ಪಾಲ್ಗೊಂಡಿರುತ್ತಾರೆ.
Comments are closed.