ಕುಂದಾಪುರ: ಇತ್ತೀಚೆಗೆ ಕೆಲವಾರು ದಿನಗಳಿಂದ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಹಾಗೂ ಫೇಸ್ ಬುಕ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ವದಂತಿ ಹಬ್ಬಿಸಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು ಈ ವದಂತಿ ಕೇವಲ ಸುಳ್ಳು. ಇಂತಹ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಲಿದೆ ಎಂದು ಕುಂದಾಪುರ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಭಯ ಬೇಡ…
ಇಂತಹ ಸುಳ್ಳು ಪೋಸ್ಟ್, ಫೋಟೋ, ವಿಡಿಯೋಗಳನ್ನು ನೋಡಿ ಸಾರ್ವಜನಿಕರು ಯಾವುದೇ ಆತಂಕ, ಭಯಗೊಳ್ಳುವುದು ಬೇಡ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ಅಪರಿಚಿತ ವ್ಯಕ್ತಿಗಳು ನಿಮ್ಮ ಪರಿಸರದಲ್ಲಿ ಕಂಡುಬಂದಲ್ಲಿ ಅವರಿಗೆ ಹೊಡೆಯುವುದು, ಹಿಂಸಿಸುವುದು ಮಾಡಬೇಡಿ. ಅಂತಹ ಕ್ರತ್ಯ ಮಾಡಿದಲ್ಲಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು. ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತವಾಗಿ ಕಳ್ಳರ ಬಗ್ಗೆ ಸುಳ್ಳು ಪೋಸ್ಟ್ ಹಾಕುವ ಕಿಡಿಗೇಡಿಗಳ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೊಲೀಸರು ಈಗಾಗಲೇ ಎಲ್ಲಾ ಭಾಗಗಳಲ್ಲಿ ಗಸ್ತು ಕಾರ್ಯವನ್ನು ಹೆಚ್ಚಿಸಿದ್ದು ಅಂತಹ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಅಥವಾ ಸಾಹ್ಯವಾದರೇ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದು ಮತ್ತು ಠಾಣೆಗೆ ಮಾಹಿತಿ ನೀಡಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.