ಮಂಗಳೂರು ಮೇ 30: ಮಂಗಳೂರಿನಲ್ಲಿ ಮಂಗಳವಾರ ಸುರಿದ ಮಹಾಮಳೆಗೆ ಸಾವನಪ್ಪಿದ ಇಬ್ಬರು ಮೃತರ ಕುಟುಂಬಗಳಿಗೆ ಪರಿಹಾರವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ಬೆಳಿಗ್ಗೆ ವಿತರಿಸಿದರು.
ನಿನ್ನೆ ಸುರಿದ ಮಳೆ ಮಂಗಳೂರು ನಗರದಲ್ಲಿ ಇಬ್ಬರನ್ನು ಬಲಿ ಪಡೆದಿತ್ತು. ನಿನ್ನೆ ಸುರಿದ ಮಹಾಮಳೆಗೆ ಸಿಲುಕಿ ವಯೋವೃದ್ಧೆ ಸೇರಿದಂತೆ ಮಹಿಳೆಯೊಬ್ಬರು ಮೃತ ಪಟ್ಟಿದ್ದರು.
ಮಂಗಳೂರಿನ ಕೆಪಿಟಿ ಸಮೀಪದ ಉದಯ ನಗರದ ನಿವಾಸಿ ಮೋಹಿನಿ (60) ಹಾಗೂ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜ ಸಮೀಪದ ಮುಕ್ತ ಬಾಯಿ (80) ಇವರು ಮೃತಪಟ್ಟಿದ್ದರು. ಈ ಇಬ್ಬರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ವಿತರಿಸಿದರು.
ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಶವಾಗಾರದ ಬಳಿ ಇಂದು ಬೆಳಿಗ್ಗೆ ಆಗಮಿಸಿದ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು
Comments are closed.