ಕರಾವಳಿ

ಮುಸ್ಲಿಂ ನಾಯಕರು ಒಪ್ಪಿದರೆ ಈ ಬಾರಿಯೂ ಇಫ್ತಾರ್ ಕೂಟ ಆಯೋಜಿಸುವೆ: ಪೇಜಾವರ ಶ್ರೀ

Pinterest LinkedIn Tumblr

ಉಡುಪಿ: ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದ್ದು ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಆದರೆ ಈ ಬಾರಿ ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ. ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಒಪ್ಪಿದಲ್ಲಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ಪೇಜಾವರ ಶ್ರೀಗಳು ಉಡುಪಿಯಲ್ಲಿ ಹೇಳಿದ್ದಾರೆ.

ಅಲ್ಪಸಂಖ್ಯಾತರನ್ನು ಬಹು ಸಂಖ್ಯಾತರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಬದಲಿಸಿ ಅಂತ ನಾನು ಯಾವತ್ತೂ ಹೇಳಿಲ್ಲ . ದೇಶದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ದೇಶದಲ್ಲಿ ಎಲ್ಲರಿಗೂ ಒಂದೇ ನ್ಯಾಯ ಇರಬೇಕು. ಶಿಕ್ಷಣ, ಆಹಾರ, ಸರ್ಕಾರದ ಯೋಜನೆ ಎಲ್ಲಾ ಧರ್ಮದ ಬಡವರಿಗೆ ಸಿಗಬೇಕು. ನಾನು ಅಂಬೇಡ್ಕರ್ ವಿರೋಧಿಯಲ್ಲ. ಎಲ್ಲಾ ಧರ್ಮ , ಜಾತಿಯವರೊಂದಿಗೆ ನಾನು ಚೆನ್ನಾಗಿದ್ದೇನೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

Comments are closed.