ಕರಾವಳಿ

ಮುಂಗಾರು ಮಳೆ ಚುರುಕು : ಬಿರುಗಾಳಿ ಸಹಿತ ಭಾರಿ ಮಳೆ ಸಂಭವ ಹಿನ್ನೆಲೆ : ದ.ಕ.ಜಿಲ್ಲೆಯಾದ್ಯಂತ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ

Pinterest LinkedIn Tumblr

ಮಂಗಳೂರು, ಜೂನ್ 8: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬುಧವಾರ ರಾತ್ರಿಯಿಂದ ಆರಂಭಗೊಂಡ ಮಳೆಯು ಗುರುವಾರ ಹಾಗೂ ಶುಕ್ರವಾರ ಕೂಡ ಮುಂದುವರಿದು ಬಿರುಸುಗೊಂಡಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಎರಡು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಹವಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮತ್ತು ದ.ಕ.ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥೀಲ್ ಅವರು ಅದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು ಹೈಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ ಮುಂದಿನ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶ, ಕೇರಳ, ಗೋವಾ, ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಸಂಬಂಧ ವಿಶೇಷವಾಗಿ ಕೇಂದ್ರ ಹವಾಮಾನ ಇಲಾಖೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ ವಹಿಸುವಂತೆ ತಿಳಿಸಿದೆ.

ಹವಾಮಾನ ಇಲಾಖೆಯ ಸೂಚನೆಯಂತೆ, ನಾಳೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, 60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಅಂದಾಜಿನ ಪ್ರಕಾರ ಜೂನ್ 8ರಂದು ಈ ಮೂರು ಜಿಲ್ಲೆಗಳಲ್ಲಿ 65 ಮಿಮೀ ನಿಂದ 115ಮಿಮೀ ವರೆಗೆ ಭಾರೀ ಮಳೆ ಸುರಿಯಲಿದೆ.

ಸಮುದ್ರದ ಮಟ್ಟದಲ್ಲಿ ಏರಿಕೆಯಾಗುವ ಆತಂಕವಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ. ಕರಾವಳಿಗೆ ಈಗಾಗಲೇ ಮುಂಗಾರು ಮಾರುತಗಳ ಪ್ರವೇಶವಾಗಿದೆ ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ 6ರ ಬಳಕೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಹವಾಮಾನ ಇಲಾಖೆ ಜೂನ್ 7 ಮತ್ತು 8ರಂದು ಮಹಾಮಳೆ ಸುರಿಯುವ ಎಚ್ಚರಿಕೆ ನೀಡಿದೆ.

ಮೇ 29ರ ಭಯ ಇನ್ನೂ ಹೋಗಿಲ : ಆತಂಕದಲ್ಲಿ ಮಂಗಳೂರಿನ ಜನತೆ

ಕಳೆದ ತಿಂಗಳ 29ರಂದು ಕರ್ನಾಟಕದ ಕರಾವಳಿಗೆ ಪ್ರವೇಶಿಸಿದ ಮುಂಗಾರು ಜಿಲ್ಲೆಯಾದ್ಯಂತ ಭಾರೀ ಮಳೆಗೆ ನಾಲ್ಕು ಜೀವಗಳು ಬಲಿ ಪಡೆದುಕೊಂಡಿತ್ತು. ಅಪಾರ ಹಾನಿ ಸಹಿತ ಜನಜೀವನ ಅಸ್ತವ್ಯಸ್ತಗೊಳಿಸಿತ್ತು. ಜಿಲ್ಲಾಡಳಿತ ವರದಿಯಂತೆ ಆರು ಗಂಟೆಗಳ ಆ ಮಹಾ ಮಳೆಗೆ ದ.ಕ. ಜಿಲ್ಲೆಯಲ್ಲಿ 35 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದವು. 42 ಮನೆಗಳಿಗೆ ಬಹುತೇಕ ಹಾಗೂ 483 ಮನೆಗಳಿಗೆ ಸಣ್ಣ ಪುಟ್ಟ ಹಾನಿ ಸಹಿತ ಜಿಲ್ಲೆಯಲ್ಲಿ ಒಟ್ಟು 20 ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿತ್ತು. ಅಲ್ಲದೆ ಎಡೆಬಿಡದೆ ಸುರಿದ ಮಳೆಗೆ ಮಂಗಳೂರು ನಗರದ ಪ್ರಮುಖ ರಸ್ತೆಗಳು ಹಾಗೂ ಹೆದ್ದಾರಿಗಳಲ್ಲಿ ಕೃತಕ ನೆರೆ ಉಂಟಾಗಿ ಜಿನಜೀವನ ಅಸ್ತವ್ಯಸ್ತಗೊಂಡಿತ್ತು.

ಮೇ 29ರ ಮಳೆ ಪ್ರಭಾವ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೇ 215 ಮಿ.ಮೀ. ಮಳೆಯಾಗಿದ್ದು, 40 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿತ್ತು. ನಗರದ ಕೊಟ್ಟಾರ ಚೌಕಿ ರಾಷ್ಟ್ರೀಯ ಹೆದ್ದಾರಿ ಮತ್ತು ಪಂಪ್‌ವೆಲ್ ರಾಷ್ಟ್ರೀ ಹೆದ್ದಾರಿಗಳಲ್ಲಿ ಕೃತಕ ನೆರೆ ಉಂಟಾಗಿ ಬಸ್ಸು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಡುಪಿ ಹಾಗೂ ಸುರತ್ಕಲ್ ಕಾವೂರು ಮೊದಲಾದ ಕಡೆಗಳಿಂದ ಕೂಳೂರು ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರಿಗೆ ಆಗಮಿಸಿದ ಬಸ್ಸುಗಳು ಕೊಟ್ಟಾರ ಚೌಕಿಯಲ್ಲಿ ಉಂಟಾದ ಕೃತಕ ನೆರೆಗೆ ನಗರ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಪ್ರಯಾಣಿಕರು ಕೆಲವು ಗಂಟೆಗಳ ಕಾಲ ಪರದಾಡಬೇಕಾಯಿತು.

ಪ್ರಮುಖ ರಸ್ತೆಗಳನ್ನು ಸೇರು ಪಂಪ್‌ವೆಲ್‌ನಲ್ಲೂ ಬಿ.ಇಸಿ.ರೋಡ್, ಉಳ್ಳಾಲ ಕಡೆಯಿಂಗಳಿಂದ ಬರುವ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಉಂಟಾದ ನೆರೆಗೆ ಆಟೊ ರಿಕ್ಷಾಗಳು ಬಂದ್ ಬಿದ್ದು ಪರಾದಾಡಿದ್ದವು. ದಿಢೀರ್ ಸುರಿದ ಈ ಮಹಾ ಮಳೆ ವಿದ್ಯಾರ್ಥಿಗಳು ಕೂಡ ವಾಹನ ಸಂಚಾರವಿಲ್ಲದೆ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆ ತರಲು ಪರದಾಡಬೇಕಾಯಿತು.

ಇದೀಗ ಗುರುವಾರ ಚುರುಕು ಪಡೆದ ಮುಂಗಾರು ಮಳೆ ಮತ್ತೊಮ್ಮೆ ಪ್ರಾಣ-ಸೊತ್ತು ಹಾನಿ ಸಹಿತ ಜನಜೀವನವನ್ನು ಅಸ್ತವ್ಯವಸ್ತಗೊಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವ್ಯಾಪಕ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

Comments are closed.