ಕರಾವಳಿ

ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆ ಹಿನ್ನೆಲೆ : ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Pinterest LinkedIn Tumblr

ಮಂಗಳೂರು, ಜೂನ್. 14: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಮತ್ತೆ ಚುರುಕು ಪಡೆದುಕೊಂಡಿದೆ. ಪುತ್ತೂರು ತಾಲೂಕಿನ ವಿವಿಧೆಡೆ ಸುರಿಯುತ್ತಿರುವ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ಪುತ್ತೂರು ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನಾದ್ಯಾಂತ ನದಿ, ಹೊಳೆಗಳು ತುಂಬಿ ಹರಿಯುತ್ತಿವೆ. ಮಂಗಳೂರು ನಗರದಲ್ಲಿ ಎರಡು ದಿನ ಸ್ವಲ್ಪ ಕಡಿಮೆಗೊಂಡಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಆದರೆ ಇದುವರೆಗೆ ಯಾವೂದೇ ಸೊತ್ತು ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ನಡುವೆ ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿಯ ಗುರುವಾಯನಕೆರೆ ಎಂಬಲ್ಲಿ ಮಂಗಳೂರು-ಧರ್ಮಸ್ಥಳ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಗುರುವಾಯನಕೆರೆ ಪೇಟೆಯ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಕೆಲವೆಡೆ ಮನೆಯ ಅಂಗಳಕ್ಕೂ ನೆರೆನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆಯಾಗುತ್ತಿದ್ದು ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.

Comments are closed.