ಕರಾವಳಿ

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ : ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ : ವರುಣನ ಅರ್ಭಟಕ್ಕೆ ತತ್ತರಿಸಿದ ಜನತೆ : ಶಾಲಾ ಕಾಲೇಜುಗಳಿ ರಜೆ ಘೋಷಿಸಲು ಆಗ್ರಹ

Pinterest LinkedIn Tumblr

ಮಂಗಳೂರು ಜೂನ್.19: ಕರಾವಳಿ ಜಿಲ್ಲೆಯಾದ್ಯಂತ ಮಂಗಳವಾರ ಬೆಳಗ್ಗಿನಿಂದ ಮತ್ತೆ ಮಳೆ ಆರಂಭವಾಗಿದ್ದು, ಇಂದು ಮುಂಜಾನೆ ಯಿಂದ ಧಾರಕರವಾಗಿ ಸುರಿದ ಭಾರೀ ಮಳೆಗೆ ಮಂಗಳೂರಿನ ಹಲವೆಡೆಗಳಲ್ಲಿ ಮತ್ತೆ ಜಲಪ್ರಳಯದ ಪರಿಸ್ತಿತಿ ಉಂಟಾಗಿದೆ.

ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಟ್ಟು ಬರುತ್ತಿದ್ದ ಮಳೆ ಇಂದು ಮುಂಜಾನೆ ಮತ್ತೆ ಬಿರುಸು ಪಡೆದುಕೊಂಡಿದೆ. ಇಂದು ಮುಂಜಾನೆಯಿಂದ ಕರಾವಳಿಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಜನತೆ ಕಂಗಾಗಲಾಗಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ವರ್ಷಧಾರೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಂಗಳೂರಿನ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದ್ದು ಜನಜೀವನ ತತ್ತರಿಸಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ರಸ್ತೆಯಲ್ಲೇ ಹರಿದ ಕೃತಕ ಪ್ರವಾಹದಿಂದ ಜನರು ಕಂಗಲಾಗಿದ್ದಾರೆ.

ಮಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಸ್ತೆಗಳಲ್ಲೂ ಪ್ರವಾಹ ತುಂಬಿ ಹರಿಯುತ್ತಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದ್ದು, ಮಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿವೆ.

ಮುನ್ಸೂಚನೆಯಂತೆ ಧಾರಾಕಾರ ಮಳೆ :

ಹವಾಮಾನ ಇಲಾಖೆ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಕರಾವಳಿಯಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ಕೂಡ ನೀಡಿತ್ತು. ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ.

ಶಾಲಾ ಕಾಲೇಜುಗಳಿ ರಜೆ ಘೋಷಿಸಲು ಆಗ್ರಹ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಭಾರಿ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಕ್ಯಾಂಪಸ್ ಫ್ರಂಟ್ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.

ಅಪಾಯದ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮ ಕೈಗೊಳ್ಳಬೇಕಾಗಿ ಜಿಲ್ಲಾಧಿಕಾರಿಯವರಿಗೆ ಆಗ್ರಹಿಸಿಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಸಾದಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.