ಕರಾವಳಿ

ಕರಾವಳಿ ಜಿಲ್ಲೆಯಲಿ ಭಾರೀ ಮಳೆ ಹಿನ್ನೆಲೆ : ಜಿಲ್ಲಾಡಳಿತದಿಂದ ಮುನ್ನೆಚ್ಚರಿಕಾ ಕ್ರಮ / ಮಳೆ ಹಾನಿ ಸಮಸ್ಯೆಗೆ 1077 ಗೆ ಕರೆ ಮಾಡಲು ಕರೆ

Pinterest LinkedIn Tumblr

ಮಂಗಳೂರು ಆಗಸ್ಟ್ 14 : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ನಿರಂತರ ಭಾರೀ ಮಳೆಯಾಗುವ ಸಂಭವವಿರುತ್ತದೆ ಎಂದು ಭಾರತ ಹವಾಮಾನ ಇಲಾಖೆ, ಬೆಂಗಳೂರು ಇವರಿಂದ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ಬಂದಿದೆ.

ಅದರಂತೆ ಮುಂದಿನ 24 ಗಂಟೆ ಕರಾವಳಿ ಪ್ರದೇಶದಲ್ಲಿ ಯಾವುದೇ ಮಿನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಿದೆ ಹಾಗೂ ತಗ್ಗು ಪ್ರದೇಶದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ/ ನದಿ ತೀರಕ್ಕೆ ತೆರಳದಂತೆ ಸೂಚಿಸಿದೆ.

ಈಗಾಗಲೇ ಶಾಲಾ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಲಾಗಿದ್ದು ನೀರಿರುವ ತಗ್ಗು ಪ್ರದೆಶಗಳಿಗೆ ಹಾಗೂ ನದಿ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆವಹಿಸಲು ತಿಳಿಸಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 24×7 ಕಂಟ್ರೋಲ್ ರೂಂ ಸಂಖ್ಯೆ 1077 ಗೆ ಕರೆ ಮಾಡಿ ದೂರು ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.