ಮಂಗಳೂರು, ಅಕ್ಟೋಬರ್. 2: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮದಿನಾಚರಣೆ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗಾಂಧಿಜಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದ ಅತಿಥಿಗಳು ಬಳಿಕ ಗಾಂದೀಜಿಯವರ ಎರಡು ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಿದರು.
ಕಾರ್ಯ ಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಕಸಾಪ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಮಹಮ್ಮದ್ ಮೋನ್ ಮತ್ತಿತರರು ಉಪಸ್ಥಿತರಿದ್ದರು.
Comments are closed.