ಕರಾವಳಿ

ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ’ ನಾಳೆ ಮಂಗಳೂರಿನಲ್ಲಿ ಬೃಹತ್ ‘ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಆಕ್ಟೋಬರ್.21 : ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ವಿಷಯದಲ್ಲಿ ಕೇರಳ ಸರ್ಕಾರವು ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಅಯ್ಯಪ್ಪಸ್ವಾಮಿ ಭಕ್ತರು ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ನಾಳೆ (22.10.2018 ನೇ ಸೋಮವಾರ) ಬೆಳಿಗ್ಗೆ 11.30 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಹಿಂದುತ್ವನಿಷ್ಠರ ಹತ್ಯೆಯನ್ನು ಮಾಡುವ ಅಬಿದ್ ಪಾಶಾ ಮತ್ತು ಅವರ ಗುಂಪಿನ ಮೇಲೆ ‘ಕೋಕಾ’ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಾಗೂ ಚರ್ಚ್‌ಗಳಲ್ಲಿ ನಡೆಯುವ ಲೈಂಗಿಕ ಶೋಷಣೆ ಮತ್ತು ಬಲಾತ್ಕಾರ ಪ್ರಕರಣಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಚರ್ಚ್‌ಗಳು ಮತ್ತು ಮಿಶನರಿ ಸಂಸ್ಥೆಗಳ ತಪಾಸಣೆ ನಡೆಸುವಂತೆ ಇದೇ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಆಗ್ರಹಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗೆ ಎಲ್ಲಾ ಅಯ್ಯಪ್ಪಸ್ವಾಮಿ ಭಕ್ತರು ಹಾಗೂ ಧರ್ಮಪ್ರೇಮಿ ಬಾಂಧವರು ಉಪಸ್ಥಿತರಿರಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುವುದಾಗಿ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಚಂದ್ರ ಮೊಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.