ಮಂಗಳೂರು,ನವೆಂಬರ್. 09: ರಾಜ್ಯ ಸರಕಾರ ನ.10ರಂದು ಆಚರಿಸಲು ಹೊರಟಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಖಂಡಿಸಿರುವ ಬಜರಂಗದಳ ಮಂಗಳೂರು ಘಟಕವು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಸರಕಾರವನ್ನು ಆಗ್ರಹಿಸಿದೆ.
ಟಿಪ್ಪು ಸುಲ್ತಾನ್ ಹಿಂದೂ ವಿರೋಧಿಯಾಗಿದ್ದ ಎಂದು ಆರೋಪಿಸಿರುವ ಬಜರಂಗ ದಳ, ಇಂತಹ ರಾಜನ ಜಯಂತಿಯನ್ನು ಸರಕಾರ ಆಚರಿಸಲು ನಿರ್ಧರಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿ ಮಂಗಳೂರು ಪೊಲೀಸ್ ಕಮಿಷನರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಬಜರಂಗದಳ ಮುಖಂಡರಾದ ಶರಣ್ ಪಂಪ್‌ವೆಲ್, ಭುಜಂಗ ಕುಲಾಲ್, ಪ್ರವೀಣ್ ಕುತ್ತಾರ್ ಮತ್ತಿತ್ತರ ಪ್ರಮುಖರು ಪಾಲ್ಗೊಂಡಿದ್ದರು.
Comments are closed.