ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾದಚಾರಿ ಮಹಿಳೆಯರ ಕುತ್ತಿಗೆಯಿಂದ ಸರ ಎಳೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಡೀಲ್, ಕತ್ತಲ್ ಸಾರ್ ನಿವಾಸಿ ತಿಲಕ್ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಚಿನ್ನದ ಸರ -1 ಅಂದಾಜು ಮೌಲ್ಯ ರೂ.25,000/, ಚಿನ್ನದ ಸರ-1, ಅಂದಾಜು ಮೌಲ್ಯ ರೂ.15,000/, ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನ ಹಾಗೂ ನಗದು ರೂ.3700/ ಯನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ : ದಿನಾಂಕ 11.12.2018 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಎರಮೆ ಎಂಬಲ್ಲಿ ಶ್ರೀಮತಿ ಪುಪ್ಪಾ ರವರು ನಡೆದುಕೊಂಡು ಹೋಗುತ್ತಿರುವಾಗ ಬೆಳಿಗ್ಗೆ ವೇಳೆಯಲ್ಲಿ ಓಬ್ಬ ವ್ಯಕ್ತಿಯು ಕಪ್ಪು ಬಣ್ಣದ ಸ್ಕೂಟರಿನಲ್ಲಿ ಬಂದು ಶ್ರೀಮತಿ ಪುಷ್ಪಾರವರ ಕುತ್ತಿಗೆಗೆ ಕೈ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿಸರವನ್ನು ಎಳೆದುಕೊಂಡು ಪರಾರಿಯಾಗಿದ್ದು ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಇನ್ನೊಂದು ಪ್ರಕರಣ ದಿನಾಂಕ 17.12.2018 ರಂದು ಕೊಳಂಬೆ ಗ್ರಾಮದ ಹೊಯಿಗೆಪದವು ನಿವಾಸಿ ಕು.ಅಕ್ಷತಾರವರು ತನ್ನ ಸಹೋದರಿ ಅಶ್ವಿತರೊಂದಿಗೆ ತನ್ನ ಮನೆಯಿಂದ ಬಜಪೆಗೆ ಕಜೆಪದವು ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮದ್ಯಾಹ್ನ ಕೊಳಂಬೆ ಗ್ರಾಮದ, ಹೊಯಿಗೆಪದವು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಓರ್ವ ವ್ಯಕ್ತಿಯು ಕಪ್ಪು ಬಣ್ಣದ ಹೊಂಡಾ ಆಕ್ಟಿವಾ ಸ್ಕೂಟರಿನಲ್ಲಿ ಬಂದು, ದೂರುದಾರರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದು ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಒಂದೇ ತಿಂಗಳಲ್ಲಿ ನಡೆದ ಈ ಎರಡು ಸರ ಅಪಹರಣ ಪ್ರಕರಣದ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾಗ ದಿನಾಂಕ 19-12-2018 ರಂದು ಈ ಪ್ರಕರಣದಲ್ಲಿ ಸರ ಅಪಹರಣ ಮಾಡಿದ ವ್ಯಕ್ತಿಯನ್ನೇ ಹೋಲುವ ವ್ಯಕ್ತಿಯೊಬ್ಬ ಮೂಡುಪೆರಾರ ಗ್ರಾಮದ, ಬಲವಂಡಿ ದೈವಸ್ಥಾನ ರಸ್ತೆ ಬಳಿ ಕಂಡು ಬಂದಿದ್ದು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಯನ್ನು ನಡೆಸಿ ಆರೋಪಿಯಿಂದ ಕಳವು ಮಾಡಿರುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರಾದ ಟಿ.ಆರ್. ಸುರೇಶ್ ರವರ ಆದೇಶದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಶ್ರೀಮತಿ ಉಮಾ ಪ್ರಶಾಂತ್ ರವರ ಹಾಗೂ ಎಸಿಪಿ ಮಂಜುನಾಥ ಶೆಟ್ಟಿರವರ ನಿರ್ದೇಶನದಂತೆ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪೊಲೀಸ್ ನಿರೀಕ್ಷಕ ಎಸ್. ಪರಶಿವ ಮೂರ್ತಿ., ಪೊಲೀಸ್ ಉಪನಿರೀಕ್ಷಕರಾದ ಶಂಕರ ನಾಯರಿ, ಸಿಬ್ಬಂದಿಗಳಾದ ಪ್ರಕಾಶ್ ಮೂರ್ತಿ, ಚಂದ್ರಮೋಹನ್ ಪ್ರೇಮಾನಂದ, ಶಶಿಧರ, ಲಕ್ಷ್ಮಣ ಕಾಂಬ್ಳೆ, ಮುತ್ತಣ್ಣ ಶಿರಗ, ಹೇಮಂತ ಗೌಡ., ಉಮೇಶ್. ಕಿರಣ್ ಕುಮಾರ್ ರವರು ಪಾಲ್ಗೊಂಡಿದ್ದರು.
Comments are closed.