ಮಂಗಳೂರು, ಮಾರ್ಚ್. 9: ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಭೇಟಿ ನೀಡಿದರು.
ತಮ್ಮ ಪುತ್ರ ಸಂಸದ ರಾಘವೇಂದ್ರ ಅವರೊಂದಿಗೆ ಶನಿವಾರ ಬೆಳಗ್ಗೆ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ ಅವರು ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಗರದಲ್ಲಿ ಇಂದು ಹಮ್ಮಿಕೊಂಡಿದ್ದ ಬೆಜೆಪಿಯ ಶಕ್ತಿಕೇಂದ್ರ ಪ್ರಮುಖರ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಸಮಾವೇಶಕ್ಕೂ ಮೊದಲು ಪೊಳಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.
ಈ ವೇಳೆ ಸ್ಥಳೀಯ ಶಾಸಕ ರಾಜೇಶ್ ನಾಯ್ಕ, ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್, ಪಕ್ಷದ ಪ್ರಮುಖರಾದ ಪದ್ಮನಾಭ ಕೊಟ್ಟಾರಿ, ಜಗದೀಶ್ ಅಧಿಕಾರಿ ಹಾಗೂ ಮತ್ತಿತ್ತರರು ಜತೆಗಿದ್ದರು.
Comments are closed.