ಮಂಗಳೂರು, ಮಾರ್ಚ್.14: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಕ್ರಿಯ ರೌಡಿಗಳ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೊಲೀಸರು ಗುರುವಾರ ಬೆಳಗ್ಗೆ ಮೂವರನ್ನು ಬಂಧಿಸಿ, ಬಂಧಿತರ ಬಳಿಯಿದ್ದ ಎರಡು ತಲವಾರು ಹಾಗೂ ಸ್ಕಾರ್ಪಿಯೊ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೋಜ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಆರೋಪಿಗಳಿಂದ ದಾಖಲೆ ರಹಿತ ಸ್ಕಾರ್ಪಿಯೋ ಹಾಗೂ ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೋರ್ವ ಆರೋಪಿ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಇಮ್ರಾನ್ ಎಂಬಾತನನ್ನು ಬಂಧಿಸಿ ಆತನಿಂದ ಎರಡು ತಲವಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದೇ ವೇಳೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಪೊಲೀಸ್ ಮೈದಾನದಲ್ಲಿ ಗುರುವಾರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 200 ಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದ್ದು, ಯಾವೂದೇ ಅಹಿತಕರ ಘಟನೆಗಳನ್ನು ಭಾಗಿಯಾಗದಂತೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿ ಕಳುಹಿಸಲಾಗಿದೆ.
Comments are closed.