ಮಂಗಳೂರು : ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಅಲ್ಲ. ಆದರೆ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ಎಸ್ ಸಿ ಡಿಸಿಸಿ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಸುದ್ಧಿ ಹಬ್ಬಿದೆ. ಈ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂದು ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಮ್ ಎನ್ ಆರ್ ನಾನು ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಹಾಕಿಲ್ಲ, ಆಕಾಂಕ್ಷಿಯೂ ಅಲ್ಲ. ನಾನು ಆಕಾಂಕ್ಷಿಯಲ್ಲದೆ ಇದ್ದರೂ ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನನ್ನ ಹೆಸರು ಮುಂಚೂಣಿಯಲ್ಲಿದೆ.
ಕಾಂಗ್ರೆಸ್ ನನಗೆ ಸಾಕಷ್ಟು ಸಹಾಯ ಮಾಡಿದೆ. ಆ ಕಾರಣದಿಂದ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಸ್ಪರ್ದೆಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ತಮ್ಮ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಏನು ಹೇಳುತ್ತಿರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜೇಂದ್ರ ಕುಮಾರ್, 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಸ್ಪರ್ಧಿಸಿದ್ದಾಗ ಅವರ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದವನು ನಾನು. ಅವರು ಹಿರಿಯರು. ಹಿರಿಯರಾದ ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
Comments are closed.