ಕರಾವಳಿ

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಎಂಟು ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು ಮಾರ್ಚ್ 26 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ವಿವಿಧ ಪಕ್ಷಗಳ ಐವರು ಅಭ್ಯರ್ಥಿಗಳು ಸೋಮವಾರ ಉಮೇದುವಾರಿಕೆ ಸಲ್ಲಿಸಿದರು. ದ.ಕ ಜಿಲ್ಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು ಎಂಟು ನಾಮಪತ್ರ ಸಲ್ಲಿಕೆಯಾಗಿದೆ.

ಭಾರತೀಯ ಜನತಾ ಪಾರ್ಟಿಯಿಂದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷದಿಂದ ಮಿಥುನ್ ರೈ, ಸೋಶಿಯಲ್ ಡೆಮಾಕ್ರೆಟಿಕ್ (ಎಸ್‌ಡಿಪಿಐ) ಪಕ್ಷದಿಂದ ಮಹಮ್ಮದ್ ಇಲಿಯಾಸ್, ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದಿಂದ ಇಸ್ಮಾಯಿಲ್ ಶಾಫಿ ಕೆ ಹಾಗೂ ಪಕ್ಷೇತರ ಪಕ್ಷದಿಂದ ಮ್ಯಾಕ್ಸಿಂ ಪಿಂಟೋ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಮೊದಲ ದಿನವಾದ (ಮಾರ್ಚ್, 19) ಮಂಗಳವಾರ ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಬುಧವಾರ ಮತ್ತು ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ.

ನಾಲ್ಕನೆ ದಿನವಾದ ( ಮಾರ್ಚ್, 22) ಶುಕ್ರವಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಎರಡು ನಾಮಪತ್ರ ಸಲ್ಲಿಕೆಯಾಗಿದೆ. ಉತ್ತಮ ಪ್ರಜಾಕೀಯ ಪಕ್ಷದಿಂದ ವಿಜಯಶ್ರೀನಿವಾಸ ಸಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೋ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು ಎಂಟು ನಾಮಪತ್ರ ಸಲ್ಲಿಕೆಯಾಗಿದೆ.

ಮತದಾನಕ್ಕೆ ಗುರುತಿನ ಚೀಟಿ ಅಧಿಕೃತ ದಾಖಲೆಯಲ್ಲ : ಚುನಾವಣಾಧಿಕಾರಿ

ಮಂಗಳೂರು : ಲೋಕಸಭಾ ಸಾವ್ರರ್ತಿಕ ಚುನಾವಣೆ -2019 ರ ಮತದಾನ ಮಾಡಲು ಮತದಾರರ ಚೀಟಿ (Voter Slip) ಅಧಿಕೃತ ದಾಖಲೆ ಅಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.

ಅರ್ಹ ಮತದಾರರು ಮತದಾನದ ವೇಳೆ ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್, ಕೇಂದ್ರ ಸರಕಾರ / ರಾಜ್ಯ ಸರಕಾರ / ಸಾರ್ವಜನಿಕ ಸಂಸ್ಥೆಯಿಂದ ಪಡೆದ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್ / ಅಂಚೆ ಕಚೇರಿ ಪಾಸ್ ಪುಸ್ತಕ , ಪಾನ್ ಕಾರ್ಡ್ , ಸ್ಮಾಟ್ ಕಾರ್ಡ್, ಜಾಬ್ ಕಾರ್ಡ್, ಕಾರ್ಮಿಕ ಸಚಿವಾಲಯದಿಂದ ನೀಡಿದ ಆರೋಗ್ಯ ವಿಮೆ ಸ್ಮಾಟ್ ಕಾರ್ಡ್ , ಭಾವಚಿತ್ರವಿರುವ ಪಿಂಚಣಿ ದಾಖಲಾತಿ, ಅಧಿಕೃತ ಗುರುತಿನ ಚೀಟಿ, ಆಧಾರ್ ಕಾರ್ಡ್ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಿ ಮತ ಚಲಾಯಿಸಲು ಅವಕಾಶವಿರುತ್ತದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Comments are closed.