ಉಡುಪಿ: ಎಐಸಿಸಿ ಸದಸ್ಯ, ಕಾಂಗ್ರೆಸ್‌ನಿಂದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಅಮೃತ್ ಶೆಣೈ ಅವರು ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದಕ್ಕೆ ಬೇಸರವಾಗಿದೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದೇನೆ. ಕಳೆದ ಎಲ್ಲಾ ಚುನಾವಣೆಗಳಲ್ಲಿ ಎರಡು ಜಿಲ್ಲೆಗಳನ್ನು ಸುತ್ತಿದ್ದೇನೆ. ಎರಡೂ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕಮ್ಮಿ ಇದ್ದರೂ ಟಿಕೆಟ್ ಕೊಟ್ಟು ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಗೆಲ್ಲುವ ಅವಕಾಶವಿತ್ತು. ಸ್ನೇಹಿತರು ಮತ್ತು ಅಭಿಮಾನಿಗಳ ಒತ್ತಡಕ್ಕಾಗಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ನಾಮಪತ್ರ ವಾಪಸ್ ಪಡೆಯುವುದಿಲ್ಲ.
ಕಾಂಗ್ರೆಸ್ ಸದಸ್ಯತ್ವಕ್ಕೆ, ಎಐಸಿಸಿ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಸಿದ್ಧನಿದ್ದೇನೆ ಎಂದು ಅಮೃತ್ ಶೆಣೈ ಪ್ರತಿಕ್ರಿಯಿಸಿದ್ದಾರೆ.
Comments are closed.