ಮಂಗಳೂರು, ಮೇ.23 : ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಳೆದ ಸಾಲಿನ ಗೆಲುವಿನ ದಾಖಲೆ ಈ ಬಾರಿ ಮುರಿದಿದು ಪ್ರಚಂಡ ಬಹುಮತದೊಂದಿಗೆ ಭರ್ಜರಿ ಜಯಗಳಿಸಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಟೀಲ್ ಭರ್ಜರಿ ಜಯದೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಗುರುವಾರ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಬಂಟ್ಸ್ ಹಾಸ್ಟೇಲ್ ಸಮೀಪದ ಪಕ್ಷದ ಚುನಾವಣಾ ಕಚೇರಿ ಮುಂಭಾಗ ವಿಜಯೋತ್ಸವ ಆಚರಿಸಲಾಯಿತು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚುವ ಮೂಲಕ ಸಂಭ್ರಮ ಆಚರಿಸಿದರು.
ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ 4,99,030 ಮತಗಳನ್ನು ಪಡೆದಿದ್ದರೆ, ನಳಿನ್ 6,42,739 ಮತಗಳನ್ನು ಪಡೆದು, 1,43,709 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ ಹೊಸ ಮುಖಕ್ಕೆ ಅವಕಾಶ ಮಾಡಿಕೊಟ್ಟರೂ ಮತದಾರರ ಮನ ಸೆಳೆಯುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.
ನಳಿನ್ ಕುಮಾರ್ ಕಟೀಲ್ 7,72,754, ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 4,99,387 ಮತ ಪಡೆದಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು 2,73,367 ದಾಖಲೆ ಮತಗಳ ಅಂತರದಿಂದ ಭರ್ಜರಿಗೆಲುವು ಸಾಧಿಸಿದ್ದಾರೆ.
ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ :
ವಿಜಯೋತ್ಸವ ಸಂದರ್ಭ ವಾಹನವೊಂದರಲ್ಲಿ ಕಚೇರಿಯ ಹೊರಭಾಗ ಬಾವುಟ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರು ಉದ್ಘೋಷ ಕೂಗಲೆತ್ನಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಉದ್ಘೋಷ ಕೂಗದಂತೆ ಕಾರ್ಯಕರ್ತನ್ನು ತಡೆದರು.
ಈ ಸಂದರ್ಭ ಕೆರಳಿದ ಕಾರ್ಯಕರ್ತರು ಹಿಂದೂಗಳಿಗೆ ಮಾತ್ರ ರಸ್ತೆಯಲ್ಲಿ ಉದ್ಘೋಷ ಕೂಗಲು ನೀವು ಬಿಡುವುದಿಲ್ಲ, ಾದೇ ಪಂಪ್‌ವೆಲ್ ಸೇರಿದಂತೆ ಕೆಲವು ನಿರ್ಧಿಷ್ಟ ಪ್ರದೇಶಗಳಲ್ಲಿ ಮುಸ್ಲಿಮರು ಗಂಟೆಗಳ ಕಾಲ ಉದ್ಘೋಷ ಕೂಗಿಕೊಂಡು ಸಂಚಾರಕ್ಕೆ ಅಡಚಣೆ ಮಾಡಿದರೂ ಸುಮ್ಮನಿರುತ್ತೀರಿ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಷ ವ್ಯಕ್ತಪಡಿಸಿದರು. ಈ ವೇಳೆ ಕೆಲಹೊತ್ತು ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು.
ಬಳಿಕ ಪೊಲೀಸರು ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಮನವೊಲಿಸುವ ಮೂಲಕ ಸ್ಥಳದಿಂದ ವಾಹನ ಹಾಗೂ ಕಾರ್ಯಕರ್ತರನ್ನು ತೆರವುಗೊಳಿಸಿ ವಾತಾವರಣ ತಿಳಿಗೊಳಿಸುವಲ್ಲಿ ಯಶಸ್ವಿಯಾದರು.
__Sathish Kapikad ( 9035089084)
Comments are closed.