ಕರಾವಳಿ

ಅವ್ಯವಸ್ಥೆ ದೂರು ಹಿನ್ನೆಲೆ : ವೆನ್ ಲಾಕ್ ಆಸ್ಪತ್ರೆಗೆ ಶಾಸಕ ಕಾಮತ್ ಧೀಡಿರ್ ಭೇಟಿ

Pinterest LinkedIn Tumblr

ಮಂಗಳೂರು : ನಗರದ ಸರಕಾರಿ ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ವೆನ್ ಲಾಕ್ ಆಸ್ಪತ್ರೆಗೆ ಧೀಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿ ಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ತಾಕೀತು ಮಾಡಿದರು.

ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು

Comments are closed.