ಮಂಗಳೂರು, ಜೂನ್.22: ಮಂಗಳೂರು ನಗರ ಪೊಲೀಸ್ ಅಯುಕ್ತರು ಈಗಾಗಲೇ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರೂ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುವವರ ಸಂಖ್ಯೆ ಕಡಿಮೆಯಾಗಿಲ್ಲ ಎಂಬುವುದಕ್ಕೆ ಉದಾಹರಣೆ ಪ್ರತಿದಿನ ಬೆಟ್ಟಿಂಗ್ ಪ್ರಕರಣಗಳು ದಾಖಲಾಗುತ್ತಿರುವುದು.
ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಇದೀಗ ಮತ್ತೆ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾವೂರು ಬಾರೊಂದರ ವೈಟರ್ ಪುತ್ತೂರು ಕೊಡಿಂಬಾಡಿ ನಿವಾಸಿ ಗಣೇಶ್ ರೈ (43) ಹಾಗೂ ಬೊಂದೆಲ್ ಕೆಎಚ್ಬಿ ಕಾಲನಿ ನಿವಾಸಿ ಸಂತೋಷ್ (28) ಎಂದು ಗುರುತಿಸಲಾಗಿದೆ.
ಆರೋಪಿ ಬಳಿಯಿಂದ 20 ಸಾವಿರ ರೂ. ನಗದು ಹಾಗೂ ಆಟಕ್ಕೆ ಬಳಸಿದ್ದ 20 ಸಾವಿರ ರೂ. ವೌಲ್ಯದ ಮೊಬೈಲ್ ಸೇರಿದಂತೆ ಒಟ್ಟು 40 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಹರೀಶ್ ಶೆಟ್ಟಿ ಹಾಗೂ ಪ್ರಮೋದ್ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.