ಕರಾವಳಿ

ರನ್ ವೇಯಿಂದ ವಿಮಾನ ಜಾರಿದ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸಚಿವ ಖಾದರ್ ಆಗ್ರಹ

Pinterest LinkedIn Tumblr

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದ ವಿಮಾನವು ರವಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ‌ ಖಾದರ್ ಮನವಿ ಮಾಡಿದ್ದಾರೆ.

ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ (ಡಿಜಿಸಿಎ) ರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದ ಏರ್ ಪೋಟ್೯ ವ್ಯವಸ್ಥೆಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು. ಕೂಡಲೇ ಈ ಬಗ್ಗೆ ಸ್ಪಂದಿಸಲು ಸಚಿವ ಖಾದರ್ ಆಗ್ರಹಿಸಿದ್ದಾರೆ.

Comments are closed.