ಕರಾವಳಿ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಜು.23ಕ್ಕೆ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಪ್ರೌಢ ಶಾಲೆಗಳಿಗೆ ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.25ರವರೆಗೆ ಪ್ರತಿದಿನ 200 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Comments are closed.