ಮಂಗಳೂರು, ಜುಲೈ.26: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಭಾರೀ ಮಳೆ ಪರಿಣಾಮ ನಗರದ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.
ಗುರುವಾರ ದಿನವಿಡೀ ವರುಣ ಅಬ್ಬರಿಸಿದ ಪರಿಣಾಮ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು,ವಿವಿಧೆಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಶುಕ್ರವಾರವೂ ಮಳೆ ಮುಂದುವರಿದಿದ್ದು, ಬೆಳಗ್ಗೆ ಸುರಿದ ಧಾರಾಕಾರ ಮಳೆಗೆ ರಸ್ತೆಯಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು.
ಪಡೀಲ್‌ನಲ್ಲಿರುವ ರೈಲ್ವೆ ಅಂಡರ್ ಪಾಸ್ ನಲ್ಲಿ ಮಳೆ ನೀರು ಶೇಖರಣೆಗೊಂಡು ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಅಂಡರ್ ಪಾಸ್‌ನಲ್ಲಿ ಭಾರೀ ಪ್ರಮಾಣದಲ್ಲಿ ನೀರು ಶೇಖರಣೆಗೊಂಡಿದ್ದು, ವಾಹನ ಸವಾರರು ತೀವ್ರ ಸಂಕಷ್ಟಕ್ಕೊಳಗಾದರು. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಜನಜೀವನ ಅಸ್ತವ್ಯಸ್ತಗೊಂಡಿದೆ.
Comments are closed.