ಕರಾವಳಿ

ಎಸ್ಸೆಸ್ಸೆಫ್ ಹಾಗು ಎಸ್‌ವೈ‍ಎಸ‌‍ನಿಂದ ಸಸಿ ವಿತರಣೆ ಹಾಗು ಸಾಧಕರಿಗೆ ಸನ್ಮಾನ

Pinterest LinkedIn Tumblr

ಉಳ್ಳಾಲ. ಎಸ್ಸೆಸ್ಸೆಫ್ ಹಾಗು ಎಸ್ ವೈ ಎಸ್ ಪಟ್ಲ ಇದರ ಜಂಟಿ ಆಶ್ರಯದಲ್ಲಿ ಪಟ್ಲದ ಸರಕಾರೀ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆಗೊಂದು ನೆರಳು ಎಂಬ ಶೀರ್ಷಿಕೆಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಹಾಗು ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಪಟ್ಲ ಶಾಖಾಧ್ಯಕ್ಷರಾದ ನಝೀರ್ ಪಟ್ಲ ವಹಿಸಿದರು. ತಖ್ವಾ ಜುಮಾ ಮಸೀದಿ ಮುದರ್ರಿಸ ರಾದ ಇಝ್ಝುದ್ದೀನ್ ಅಹ್ಸನಿ ದುವಾ ನೆರವೇರಿಸಿದರು.

ಉಳ್ಳಾಲ ನಗರ ಸಭಾಧ್ಯಕ್ಷರಾದ ಬಾಝಿಲ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು. ಮಂಗಳೂರು ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಮಾತನಾಡಿ ಪರಿಸರ ಸಂರಕ್ಷಣೆಗೆ ಗಿಡ ನೆಡುವುದು ಅನಿವಾರ್ಯ ಎಂದು ತಿಳಿಸಿದರು. ಜೆ. ಸಿ. ಐ. ಮಂಗಳೂರು ಸಾಮ್ರಾಟ್ ಇದರ ಅಧ್ಯಕ್ಷೆ ಅಶ್ವಿನಿ ಐತಾಳ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸ್ವಚ್ಛತೆ ಹಾಗು ಪರಿಸರ ಸಂರಕ್ಷಣೆಯನ್ನೇ ತನ್ನ ದಿನ ನಿತ್ಯದ ಕಾಯಕವಾಗಿಸಿರುವ ಖ್ಯಾತ ಪರಿಸರ ಪ್ರೇಮಿ ಅಬ್ದುಲ್ ರಹ್ಮಾನ್ ಪಟ್ಲ ಹಾಗು ಸಂಜೀವ ಭಂಡಾರಿ ತೋಡುದಳ ಮತ್ತು ಮಂಗಳೂರು ಉಪವಲಯ ಅರಣ್ಯಾಧಿಕಾರಿ ರವಿಕುಮಾರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಉಳ್ಳಾಲ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, ಬಿಜೆಪಿ ಮುಖಂಡ ಚಂದ್ರಹಾಸ್ ಪಂಡಿತ್ ಹೌಸ್ ಹಾಗು ದ.ಕ ಜಿಲ್ಲಾ ಟಿಪ್ಪು ಸುಲ್ತಾನ್ ಅಭಿಮಾನಿ ಬಳಗದ ಅಧ್ಯಕ್ಷರಾಗಿರುವ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಪಟ್ಲ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅಸ್ಮಾ ಬಾನು, ಖ್ಯಾತ ಉದ್ಯಮಿ ಜೆ.ಸಿ.ಐ ಮಧುಕರ್, ಪಟ್ಲ ಮದ್ರಸ ಅಧ್ಯಾಪಕರಾದ ಮುಹ್ಯಿದ್ದೀನ್ ಮುಸ್ಲಿಯಾರ್, ಜೆಡಿಎಸ್ ಮುಖಂಡರಾದ ಫಯಾಝ್, ಎಸ್ಸೆಸ್ಸೆಫ್ ಪಟ್ಲ ಶಾಖಾ ಪ್ರಧಾನ ಕಾರ್ಯದರ್ಶಿ ಕಿಫಾಯತ್, ಶಾಲಾ ಶಿಕ್ಷಕ ವ್ರಂದ, ಎಸ್ಸೆಸ್ಸೆಫ್, ಎಸ್ ವೈ ಎಸ್ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಉಳ್ಳಾಲ

Comments are closed.