ಕರ್ನಾಟಕ

‘ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ?: ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ ಮಾತಲ್ಲ, ‘ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ? ಎಂದು ಬರೆದು ಕೊಂಡಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ತಾಣ ಒದಗಿಸುವಂತೆ ಕಳೆದ ವಾರವೇ ಆಗ್ರಹಿಸಿದ್ದೆ, ಸರ್ಕಾರ ಇನ್ನೂ ಕಣ್ಣುಮುಚ್ಚಿ ಕೂತಿದೆ. ಎರಡು ಮೂರು ಸಾವಿರ ಪರಿಹಾರ ನೀಡಿದರೆ ಕಷ್ಟ ದೂರಾಗುವುದಿಲ್ಲ. ನಷ್ಟವನ್ನು ಸರಿಯಾಗಿ ಅಂದಾಜಿಸಿ, ಪರಿಹಾರ ಒದಗಿಸಬೇಕು. ಇದಕ್ಕೆ ಬೇಕಾದ ಅನುದಾನವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳು ಒಳಗೊಂಡಂತೆ ಸರ್ಕಾರದ ಎಲ್ಲ ಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗೆ ಸ್ಪಂದಿಸಬೇಕು. ಇದನ್ನು ಬಿಟ್ಟು ನಿತ್ಯ ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಓಡಾಡುತ್ತಿದ್ದರೆ ಜನರ ಕಷ್ಟ ಕೇಳುವವರಾರು ? ಎಂದು ಕಿಡಿಕಾರಿರುವ ಅವರು, ಅನೈತಿಕ ಮಾರ್ಗದ ಮೂಲಕ‌ ಅಧಿಕಾರ ಹಿಡಿದವರ ಕತೆಯೇ ಹೀಗೆ, ಅವರಿಗೆ ಜನಪರ ಕಾಳಜಿಯಿರಲ್ಲ ಎಂದು ಟೀಕಿಸಿದ್ದಾರೆ.

Comments are closed.