ಕರಾವಳಿ

ಇಂದಿನಿಂದ 6ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Pinterest LinkedIn Tumblr

ಮಂಗಳೂರು ಡಿಸೆಂಬರ್.03 : ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Comments are closed.