ಕರಾವಳಿ

ಕೋಪ್ಟಾ (COTPA- 2003) ಕಾಯಿದೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

Pinterest LinkedIn Tumblr

ಮಂಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಕ್ಷಿಣ ಕನ್ನಡ ಹಾಗೂ ಬ್ಲೂಮ್ ಬರ್ಗ್ ಇನಿಷಿಯೇಟಿವ್, ಬೆಂಗಳೂರು ಇದರ ವತಿಯಿಂದ ದ.ಕ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ COTPA -2003 ತನಿಖಾ ದಳದ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಮತ್ತು COTPA- 2003 ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ಕೋಪ್ಟಾ ಕಾಯಿದೆ ಪರಿಣಾಮಕಾರಿ ಅನುಷ್ಠಾನ ತಾಲೂಕು ಮಟ್ಟದಲ್ಲಿ ನಡೆಯಬೇಕಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಸುಷ್ಮಾ ಅದಪ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಂಪತ್ ಕುಮಾರ್ ಕಾಯಿದೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ತಾಲೂಕು ಮಟ್ಟದ ತನಿಖಾ ದಳದ ಅಧಿಕಾರಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು. ತಂಬಾಕು ನಿಯಂತ್ರಣ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಪ್ರವೀಣ್ ಸ್ವಾಗತಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಶ್ರುತಿ ಸಾಲ್ಯಾನ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಶ್ರೀನಿವಾಸ್, ಮನಪಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಜಿಲ್ಲಾ ಮಹಿಳಾ ರಕ್ಷಣಾ ಘಟಕದ ವೆಂಕಪ್ಪ ಎಂ. ಮಂಗಳೂರು ಉತ್ತರ ಬಿ.ಇ.ಒ ಆಶಾ ನಾಯಕ್, ಕೆ.ಎಸ್.ಆರ್.ಟಿ.ಸಿ ಸಹಾಯಕ ಟ್ರಾಫಿಕ್ ಮ್ಯಾನೇಜರ್ ನಿರ್ಮಲಾ, ಮನಪಾ ವಲಯ ಆಯುಕ್ತ ಅಬ್ದುಲ್ ರಹಿಮಾನ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನರೇಶ್ ಶೆಣೈ, ಇಂಜಿನಿಯರ್ ವಿಭಾಗದ ರಘುಪಾಲ್, ರೋಜ್‍ಗಾರ್ ಯೋಜನೆಯ ಚಿತ್ತರಂಜನ್, ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.