ಮಂಗಳೂರು, ಡಿ.19: ಪೌರತ್ವ ಕಾಯ್ದೆ ವಿರೋಧಿ ನಗರದಲ್ಲಿ ಪ್ರತಿಭಟನೆ ಜೋರಾಗಿದ್ದು ನಿಷೇಧಾಜ್ಞೆ ಹೊರತಾಗಿಯೂ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಯತ್ನಿಸಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.ಪೌರತ್ವ ಮಸೂದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿತ್ತು.
Comments are closed.