ಮಂಗಳೂರು, ಡಿಸೆಂಬರ್.20: ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡರನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದಿದು ಠಾಣೆಗೆ ಕರೆದೊಯ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಾಜಿ ಸ್ಪೀಕರ್,ಶಾಸಕ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ವಿ.ಎಸ್. ಉಗ್ರಪ್ಪ, ಎಂ.ಬಿ,ಪಾಟೀಲ್, ಮಾಜಿ ಸಚಿವ ಸೀತಾರಾಮ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಜಿಲ್ಲೆಯಲ್ಲಿ ನಡೆದ ಗೋಲಿಬಾರಿನಲ್ಲಿ ಮೃತಪಟ್ಟವರ ಮನೆಗೆ ಭೇಟಿ ಕೊಡಲು ಕಾಂಗ್ರೆಸ್ ನಾಯಕರು ನಗರಕ್ಕೆ ಆಗಮಿಸಿದಾಗ ಈ ಹೈಡ್ರಾಮಾ ನಡೆದಿದೆ ಎನ್ನಲಾಗಿದೆ.
ಘಟನೆ ವಿವರ :
ಗುರುವಾರ ಮಂಗಳೂರಿನಲ್ಲಿ ನಡೆದ ಗಲಾಭೆ ಸಂದರ್ಭ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದು, ಇವರ ಮನೆಗೆ ಭೇಟಿ ಕೊಡಲು ಹಾಗೂ ಗಲಾಭೆ ಸಂದರ್ಭ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವವವರಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ನಾಯಕರ ನಿಯೋಗ ಇಂದು ಮಧ್ಯಾಹ್ನ ಮಂಗಳೂರಿಗೆ ಆಗಮಿಸಿತ್ತು.
ಆದರೆ ಇವರು ಈ ಸಂದರ್ಭದಲ್ಲಿ ನಗರಕ್ಕೆ ಬಂದರೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕೆಡುತ್ತದೆ ಎಂಬ ಹಿನ್ನೆಲೆಯಲ್ಲಿ ನಿಯೋಗವನ್ನು ವಿಮಾನ ನಿಲ್ದಾಣದಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸಲು ಪೊಲೀಸರು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ವಾಪಸ್ ಹೋಗಲು ನಿರಾಕರಿಸಿದ್ದಾರೆ. ಆಗ ಪೊಲೀಸರು ನಿಮ್ಮನ್ನು ವಶಕ್ಕೆ ಪಡೆಯುತ್ತೇವೆ ಎಂದು ಹೇಳಿದ್ದರು.
ಈ ವೇಳೆ ರಮೇಶ್ ಕುಮಾರ್ ಪೊಲೀಸರ ಕ್ರಮವನ್ನು ವಿರೋಧಿಸಿದರು. ನಾವು ಕಾನೂನುಬಾಹಿರ ಕೆಲಸವನ್ನು ಮಾಡಲು ಬಂದಿಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ. ನೀವು ನಮ್ಮನ್ನು ಬಂಧಿಸಬಾರದು ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಎಳೆದಾಟ,ತಳ್ಳಾಟ ಪಾರಂಭವಾಯಿತು. ಕೊನೆಗೆ ಪೊಲೀಸರು ಹಿರಿಯ ಅಧಿಕಾರಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿ ಅವರ ಸೂಚನೆಯಂತೆ ಕಾಂಗ್ರೆಸ್ ಮುಖಂಡರೆಲ್ಲರನ್ನು ತಮ್ಮ ಜೀಪ್ನಲ್ಲಿ ಕರೆದುಕೊಂಡು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಗಲಾಭೆ ನಡೆದ ಸಂದರ್ಭ ಈ ರೀತಿ ಯಾವೂದೇ ಪಕ್ಷದ ನಾಯಕರು ನಗರಕ್ಕೆ ಆಗಮಿಸಿ ಹೈಡ್ರಾಮ ಮಾಡುವುದರಿಂದ ಜಿಲ್ಲೆಯ ಶಾಂತಿ-ಸುವ್ಯಸ್ಥೆ ಕೆಡುತ್ತದೆ ಮಾತ್ರವಲ್ಲದೇ ತಿಳಿಯಾಗಿಗೊಂಡು ಬರುತ್ತಿರುವ ಜಿಲ್ಲೆಯ ಪರಿಸ್ಥಿತಿ ಮತ್ತಷ್ಟು ಹದೆಗೆಡುತ್ತದೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಪ್ರಯತ್ನವನ್ನು ಯಾರೂ ಕೂಡ ಮಾಡಬಾರದು. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿರುವ ಪೊಲೀಸರ ಕ್ರಮ ಸರಿಯಾಗಿಯೇ ಇದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
Comments are closed.