ಕರಾವಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪ್ರವೇಶಿಸದಂತೆ ನಿರ್ಬಂಧ

Pinterest LinkedIn Tumblr

ಮಂಗಳೂರು, ಡಿಸೆಂಬರ್. 21 ಮಂಗಳೂರಿಗೆ ಬರಲು ತುದಿಗಾಲಲ್ಲಿ ನಿಂತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರ ಸಂದರ್ಭ ಇಬ್ಬರು ಪೊಲೀಸರ ಗೋಲಿಬಾರಿಗೆ ಬಲಿಯಾಗಿದ್ದು, ಅವರ ಮನೆಯವರಿಗೆ ಸಾಂತ್ವಾನ ಹೇಳಲು ಹಾಗೂ ಗಲಾಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ತಾನು ಮಂಗಳೂರಿಗೆ ಬರುವುದಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ಆದರೆ ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆ ಹಿಂಸಾತ್ಮಕ ಘಟನೆಗಳು ನಡೆದುದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ಸಂದರ್ಭ ಯಾವೂದೇ ಪಕ್ಷದ ಮುಖಂಡರು ಈ ರೀತಿ ಭೇಟಿ ನೀಡಿದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಕಷ್ಟವಾಗಬಹುದು ಎಂಬ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪ್ರವೇಶಿಸದಂತೆ ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಈ ನಿಷೇಧ ಡಿ.22 ರ ಮಧ್ಯರಾತ್ರಿ ವರೆಗೆ ಜಾರಿಯಲ್ಲಿರುತ್ತದೆ.

ಬೆಂಗಳೂರು ,ಹುಬ್ಬಳ್ಳಿ, ಮೈಸೂರು, ಗೋವಾ ಏರ್ ಪೋರ್ಟ್ ನಿಂದ ಕರೆತರುವಂತಿಲ್ಲ ಹಾಗೂ ರಸ್ತೆ, ರೈಲು, ವಾಯುಯಾನದ ಮೂಲಕ ಮಂಗಳೂರಿಗೆ ಬರುವಂತಿಲ್ಲ, ಅವರ ಪ್ರಯಾಣಕ್ಕೆ ಯಾರೂ ಸಹಕರಿಸುವಂತಿಲ್ಲ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿ ನಿಷೇಧ ಹೇರಲಾಗಿದೆ. ಪೊಲೀಸ್ ನಿರೀಕ್ಷರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಇವರ ಆದೇಶದಂತೆ ಈ ನೋಟಿಸ್ ಜಾರಿ ಮಾಡಲಾಗಿದೆ ಎಂದು ಆಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

Comments are closed.