ಮಂಗಳೂರು, ಡಿಸೆಂಬರ್.21: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಗುರುವಾರ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಕರ್ಫ್ಯೂ ವನ್ನು ಇಂದು ಮಧ್ಯಾಹ್ನ ಮೂರರಿಂದ ಸಂಜೆ ಆರರವರೆಗೆ ಸಡಿಲಿಸಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ಧಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರ ಘಟನೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಭೆಯ ನಂತರ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಜನರ ಮನವಿಯ ಮೇರೆಗೆ ಇಂದು ಮೂರು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗುವುದು. ರವಿವಾರ ರಾತ್ರಿ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ. ಸೋಮವಾರದಿಂದ ಸಂಪೂರ್ಣ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ಹೇಳಿದರು.
Comments are closed.