ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತ ಕೊನೆಗೊಂಡ ನಂತರ ಪಾಲಿಕೆ ವ್ಯಾಪ್ತಿಯ ಕೋರ್ಟ್ ವಾರ್ಡಿನ ಸಾರ್ವಜನಿಕರ ಬೇಡಿಕೆಯ ಮೇರೆಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿವಿಧ ಇಲಾಖೆಗಳಿಂದ ಒಟ್ಟು 36.55 ಲಕ್ಷ ಬಿಡುಗಡೆಗೊಳಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ವಿಶೇಷ ಅನುದಾನದಡಿ 6.55 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕೋರ್ಟ್ ವಾರ್ಡಿನ ಅಡ್ಡ ಅಭಿವೃದ್ಧಿಗೆ 5 ಲಕ್ಷ ಹಾಗೂ ಮಹರಾಜ ರೆಸಿಡೆನ್ಸಿ ಬಳಿ ತಡೆಗೋಡೆ ನಿರ್ಮಾಣಕ್ಕೆ 1.55 ಲಕ್ಷ ರೂಪಾಯಿ ಮೀಸಲಿಡಲಾಗಿದೆ.
ಮಳೆಹಾನಿ ಅನುದಾನದಲ್ಲಿ 23 ಲಕ್ಷ ಬಿಡುಗಡೆಯಾಗಿದ್ದು ಗೋರಿಗುಡ್ಡೆಯ ಬಳಿ ನೆಹರೂ ಅಡ್ಡರಸ್ತೆ ಅಭಿವೃದ್ಧಿಗಾಗಿ 5 ಲಕ್ಷ, ಕಟ್ಟೆಪುಣಿ ಬಳಿ ಮಳೆನೀರು ಹರಿದು ಹೋಗುವ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಹಾಗೂ ಮುಂದುವರಿದ ಕಾಮಗಾರಿ 13 ಲಕ್ಷ, ಮೋಹನ್ ದಾಸ್ ಲೇನ್ ಬಳಿ ಮಳೆ ನೀರು ಹರಿದು ಹೋಗುವ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ಅನುದಾನ ಒದಗಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ನಿಧಿ ಅನುದಾನದಲ್ಲಿ 7 ಲಕ್ಷ ಬಿಡುಗಡೆಗೊಳಿಸಿದ್ದು, ಕಟ್ಟಪುಣಿಯಲ್ಲಿ ಸಾರ್ವಜನಿಕ ಶೌಚಾಲಯ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರಿನ ಹೃದಯ ಭಾಗದಲ್ಲಿರುವ ಕೋರ್ಟ್ ವಾರ್ಡಿನ ಸಮಗ್ರ ಅಭಿವೃದ್ಧಿಯ ಚಿಂತನೆಯಿಂದ ಈ ಅನುದಾನ ಬಿಡುಗಡೆ ಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
Comments are closed.