ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು ಡಿಸೆಂಬರ್. 27: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ 2019-20 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತಾವನೆಯನ್ನು ಜನವರಿ 16 ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕ ನಗರ ಅಂಚೆ, ಮಂಗಳೂರು-575006 ಈ ಕಛೇರಿಯಿಂದ ನಿಗದಿತ ನಮೂನೆ ಪಡೆದು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು. ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ.ಜಿಲ್ಲೆ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.