ಮಂಗಳೂರು : ಜನವರಿ 17ರಂದು ಕರಾವಳಿ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಇಂತಿವೆ.
ಜನವರಿ 17 ರಂದು ಕದ್ರಿ ಉದ್ಯಾನವನದಲ್ಲಿ: ಸಂಜೆ 5 ಗಂಟೆಯಿಂದ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ, ಕರಾವಳಿ ಯುವ ಉತ್ಸವ ಕಾರ್ಯಕ್ರಮ ನಡೆಯಲಿದೆ.
ವಸ್ತು ಪ್ರದರ್ಶನ ವೇದಿಕೆಯಲ್ಲಿ (ಕರಾವಳಿ ಉತ್ಸವ ಮೈದಾನ): ಸಂಜೆ 6 ಗಂಟೆಯಿಂದ 7.30 ರವರೆಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಂಕಣಿ ಸಾಂಸ್ಕೃತಿಕ ವೈವಿಧ್ಯ, ಸಂಜೆ 7.30 ರಿಂದ 9 ಗಂಟೆವರೆಗೆ ದ.ಕ ಮಾಧ್ಯಮ ಮಿತ್ರ ಬಳಗ ಇವರಿಂದ ಕರಾವಳಿಯ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.
ಜನವರಿ 17 ರಂದು ಕುಂದ್ಮುಲ್ ರಂಗರಾವ್ ಪುರಭವನದಲ್ಲಿ: ಬೆಳಿಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ವಿದೇಶಿ ಹಾಗೂ ದೇಶಿ ಗಾಳಿಪಟ ಹಾರಾಟಗಾರರಿಂದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಗಾರ(ಪತ್ರಿಕಾ ಗೋಷ್ಠಿಯೊಂದಿಗೆ)
ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ :
ಜನವರಿ 17 ರಂದು ಪಣಂಬೂರು ಬೀಚಿನಲ್ಲಿ: ಸಂಜೆ 4 ಗಂಟೆಗೆ ಆಹಾರ ಉತ್ಸವ ಉದ್ಘಾಟನೆ, 4.30 ಗಂಟೆಗೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಉದ್ಘಾಟನೆ, ಸಂಜೆ 5.30 ರಿಂದ 8.30 ಗಂಟೆವರೆಗೆ ವೇದಿಕೆ ಕಾರ್ಯಕ್ರಮ – ನೃತ್ಯ ಮತ್ತು ಸಂಗೀತ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ.
Comments are closed.