ಕರಾವಳಿ

ಇಡ್ಯಾ ಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ನಡೆದ ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ

Pinterest LinkedIn Tumblr

ಮಂಗಳೂರು / ಸುರತ್ಕಲ್ : ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಾಮಂಡಲೋತ್ಸವ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವವು ಫೆಬ್ರವರಿ 9ರಂದು ಭಾನುವಾರ ಜರಗಿತು.

ಧರ್ಮನೇಮೋತ್ಸವದಲ್ಲಿ ಸಾವಿರಾರ್ಯ್ ಭಕ್ತಾಧಿಗಳು ಪಾಲ್ಗೊಂಡು ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು. ಇದಕ್ಕೂ ಮೊದಲು ಧರ್ಮನೇಮೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀಗುರು ದೇವದತ್ತ ಸ೦ಸ್ಥಾನಮ್ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಭಾ ಕಾರ್ಯಕ್ರಮದ ಘನ ಉಪಸ್ಥಿಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನುವಂಶಿಕ ಅರ್ಚಕ ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣ ಅವರು ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಚೇಳೈರು ಗಡಿಪ್ರಧಾನರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನ ಆದಿತ್ಯ ಮುಕ್ಕಾಲ್ದಿ ಅವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮಂಗಳೂರು ಬ೦ಟರ ಯಾನೆ ನಾವಡರ ಮಾತೃಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ವಹಿಸಿದ್ದರು. ಜಾನಪದ ಚಿಂತಕ ಡಾ ವೈ ಯನ್ ಶೆಟ್ಟಿ ದೈವಾರಾಧನೆ ವಿಷಯದ ಕುರಿತು ಧಾರ್ಮಿಕ ಉಪನ್ಯಾಸ ನೀಡಿದರು.

ಜಾನಪದ ವಿದ್ವಾಂಸ ಮತ್ತು ಉಪನ್ಯಾಸಕ ಗಣೇಶ್ ಅಮೀನ್ ಸಂಕಮಾರ್ ಅವರು ಶುಭಾಶ೦ಸನೆಗೈದರು. ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಕರ್ಣಾಟಕ ಬ್ಯಾಂಕ್ ಲಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಕಾರಿ ಮಹಾಬಲೇಶ್ವರ ಎಮ್ ಎಸ್, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ , ಸುರತ್ಕಲ್ ಶಾಖೆ ಒಡಿಯೂರು ಬ್ಯಾಂಕ್ ಸುರೇಶ್ ರೈ, ಪಡ್ರೆ ಶ್ರೀ ಧೂಮಾವತಿ ದೈವಸ್ಥಾನ ಬಾಬು ಬ೦ಡ್ರಿಯಾಲ್, ಕೊಲ್ಯ ಜಾರಂದಾಯ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಪ್ರಸನ್ನ ಸಿ ಕೆ, ಕುಡುಂಬೂರು ಗುತ್ತು ಗುತ್ತಿನಾತ್ ಜಯರಾಮ ಶೆಟ್ಟಿ, ಸುರತ್ಕಲ್ ಇಡ್ಯಾ ಪಣಂಬೂರು ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನ ಅಣ್ಣಪ್ಪ ಅರುವಾಳ್, ಈಶ್ವರ್ ಕಜೇರಿಸಾನ ಸುರತ್ಕಲ್, ಮುಕ್ಕ ಭಂಡಾರ ಮನೆ ದೇವೇಂದ್ರ ಪೂಜಾರಿ, ಪಡ್ರೆ ಧೂಮಾವತಿ ದೈವಸ್ಥಾನ ಅಧ್ಯಕ್ಷ ಬಾಬು ಶೆಟ್ಟಿ, ಕುಳಾಯಿಗುತ್ತು ಶಂಕರ್ ರೈ, ಸುರತ್ಕಲ್ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಆನಂದ ಗುರಿಕಾರ, ಪದವು ಮೇಗಿನಮನೆ ಯಜಮಾನ ಮಂಜಣ್ಣ ಶೆಟ್ಟಿ, ಪೆರ್ಮುದೆ ಗುರುರಾಜ ಮಾಡ ಬೊಳ್ಳುಳ್ಳಿಮಾರುಗುತ್ತು, ಅಗರಮೇಲು ಜಾರಂದಾಯ ದೈವಸ್ಥಾನ ಮೋಹನ್ ಪೂಜಾರಿ, ಎಡಪದವು ರಾಮಭಜನಾ ಮಂದಿರ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದರು.

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರ ಐ ರಮಾನಂದ ಭಟ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಸತ್ಯಜಿತ್ ಸುರತ್ಕಲ್ ಸ್ವಾಗತಿಸಿದರು.

ಜನವರಿ 30ರಿಂದ 9ರ ವರೆಗೆ ವಿವಿಧ ಕಾರ್ಯಕ್ರಮಗಳು:

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 30 ರಿಂದ 9ರ ವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಾಮಂಡಲೋತ್ಸವ, ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಜರಗಿತು.

ಸುರತ್ಕಲ್ ಸಮೀಪದ ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗು ಅಷ್ಟಪವಿತ್ರ ನಾಗಾಮಂಡಲೋತ್ಸವ ಜರಗಿತು. ಶುಕ್ರವಾರ ಪೂರ್ವಾಹ್ನ 9.30ರಿಂದ 9.45ರ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ವಿದ್ಯಾಧರ ಮುನಿ ಪ್ರತಿಷ್ಠಾಪಿತ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಿತು.

ರಾತ್ರಿ ವೇದಮೂರ್ತಿ ಸಗ್ರಿ ಶ್ರೀ ಗೋಪಾಲಕೃಷ್ಣ ಸಾಮಗ ಮದ್ದೂರು, ಶ್ರೀ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗದವರಿಂದ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಿತು ರಾತ್ರಿ 10 ಗಂಟೆಗೆ ನಾಗವನದಲ್ಲಿ ಹಾಲಿಟ್ಟು ಸೇವೆಯಾದ ನಂತರ ವೇದಮೂರ್ತಿ ಸಗ್ರಿ ಶ್ರೀ ಗೋಪಾಲಕೃಷ್ಣ ಸಾಮಗರು ಮುದ್ದುರು ಶ್ರೀ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗದವರಿಂದ ಅಷ್ಟಪವಿತ್ರ ನಾಗಮಂಡಲೋತ್ಸವವು ಜರಗಿತು. ಸಾವಿರಾರು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾಭಿಮಾನಿಗಳು ನಾಗಮಂಡಲದಲ್ಲಿ ಭಾಗವಹಿಸಿ ದೇವರ ನಾಗದರ್ಶನ ಪಡೆದು ಕೃತಾರ್ಥರಾದರು.

ಈ ಹಿಂದೆ 1979ರಲ್ಲಿ 1982ರಲ್ಲಿ ಶ್ರೀ ಮಹಾಗಣಪತಿಯ ನೂತನ ಗರ್ಭಗುಡಿ ನಿರ್ಮಾಣ ಮತ್ತು ಪುನರ್ ಪ್ರತಿಷ್ಠೆ 1991 ಮತ್ತು 2004ರಲ್ಲಿ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶ ಹಾಗು ನಾಗಮಂಡಲ ಸೇವೆ ಜರುಗಿರುತ್ತದೆ. 2004ರಲ್ಲಿ ದೇವರ ದರ್ಶನ ಪಡೆದಿದ್ದರು. ಈ ಬಾರಿಯ ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮೋತ್ಸವದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡಿದ್ದರು ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ತಿಳಿಸಿದರು.

By: Sathish Kapikad – Mob:9035089084

Comments are closed.