ಮಂಗಳೂರು : ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವವು ಇದೇ ಬರುವ ಫೆಬ್ರವರಿ ೨೯ರಿಂದ ಮಾರ್ಚ್ ೧ರ ವರೆಗೆ ಅಸೈಗೋಳಿಯ ಕೇಂದ್ರ ಮೈದಾನದಲ್ಲಿ ನಡೆಯಲಿದೆ.
ಈ ಬಾರಿಯ ಅಬ್ಬಕ್ಕ ಪ್ರಶಸ್ತಿಗೆ ಸಾಹಿತಿ, ಕಾದಂಬರಿಗಾರ್ತಿ ಉಷಾ ಪಿ.ರೈ ಹಾಗೂ ರಾಷ್ಟ್ರೀಯಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಅವರು ಆಯ್ಕೆಯಾಗಿದ್ದು, ಮಾ.1ರಂದು ನಡೆಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಪ್ರಶಸ್ತಿಯು ತಲಾ 25 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.
ಫೆ.29 ಹಾಗೂ ಮಾ.1ರಂದು ಫೆ.29ರಂದು ಮಧ್ಯಾಹ್ನ 3.30ಕ್ಕೆ ದೇರಳಕಟ್ಟೆಯಲ್ಲಿ ಅಬ್ಬಕ್ಕ ಉತ್ಸವ ಮೆರವಣಿಗೆ ನಡೆಯಲಿದೆ. ಶಾಸಕ ಯು.ಟಿ ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಹಾಗೂ ಹರೇಕಳ ಹಾಜಬ್ಬ ಆಗಮಿಸಲಿದ್ದಾರೆ. ಮಾ.1ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, 2 ದಿನಗಳ ಕಾಲ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
Comments are closed.