ಕರಾವಳಿ

ಉಳ್ಳಾಲ : ರೈಲಿನ ಮುಂದೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಅತ್ಮಹತ್ಯೆ

Pinterest LinkedIn Tumblr

ಮಂಗಳೂರು / ಉಳ್ಳಾಲ, ಫೆಬ್ರವರಿ.28: ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಉಳ್ಳಾಲ – ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮಂಗಳೂರಿನಲ್ಲಿ ಬಿ.ಇ. ಇಂಜಿನಿಯರಿಂಗ್ ಮಾಡುತ್ತಿರುವ ಬೆಳಗಾವಿ ಮೂಲದ ವಿದ್ಯಾರ್ಥಿ ಸಮ್ಮದ್ ರಾಯಗೌಡ(23) ಎಂದು ಹೆಸರಿಸಲಾಗಿದೆ.

ಆತ್ಮಹತ್ಯೆಗೆ ನಿರ್ಧಿಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಪ್ರೇಮ ವೈಫಲ್ಯವೇ ಈ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.