ಕರಾವಳಿ

ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಗೋಡೆಯ ಮಣ್ಣು ಕುಸಿತ : ಇಬ್ಬರು ಕಾರ್ಮಿಕರು ಮೃತ್ಯು – ಸಾವಿನ ಸಂಖ್ಯೆ ಹೆಚ್ಚಿರುವ ಶಂಕೆ?

Pinterest LinkedIn Tumblr

ಮಂಗಳೂರು, ಫೆಬ್ರವರಿ.28: ಕಟ್ಟಡ ಕಾಮಗಾರಿ ವೇಳೆ ಗೋಡೆಯ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ ಸಮೀಪದ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕಂಪೌಂಡ್ ಬಳಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮಣ್ಣಿನಡಿ ಐದಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರಬೇಕೆಂದು ಶಂಕಿಸಲಾಗಿದೆ.

ಘಟನೆ ನಡೆದ ಸ್ಥಳ ನಗರದ ಖ್ಯಾತ ಉದ್ಯಮಿಯೊಬ್ಬರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Comments are closed.