ಮಂಗಳೂರು, ಫೆಬ್ರವರಿ.28 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮತ್ತು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ ಫೆ.29ರಂದು ಬೆಳಗ್ಗೆ 10.30ಕ್ಕೆ ನಗರದ ಉರ್ವ ಮಾರಿಗುಡಿ ರಸ್ತೆಯ ರಾಧಾಕೃಷ್ಣ ಮಂದಿರ ಸಭಾಂಗಣದಲ್ಲಿ ನಡೆಯಲಿದೆ.
ಚಿತ್ರನಟ ರೂಪೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಸ್ನೇಹ ದೀಪ ಸಂಸ್ಥೆಯ ಸ್ಥಾಪಕಿ ತಬಸ್ಸುಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಇದೇ ಸಂದರ್ಭ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ಹಿರಿಯ ಪತ್ರಕರ್ತ ಗುರುವಪ್ಪ.ಎನ್.ಟಿ.ಬಾಳೆಪುಣಿ ಅವರಿಗೆ ಗೌರವ ಸನ್ಮಾನ ನೆರವೇರಲಿದೆ. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ.
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಕರ್ತರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.