ಮಂಗಳೂರು, ಮಾರ್ಚ್.20 : ಕೊರೊನಾ ವೈರಾಣು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಲೂನ್ / ಬ್ಯೂಟಿ ಪಾರ್ಲರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸೂಚಿಸಲಾಗಿದೆ.
ಕೊರೊನಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಈ ಮಾರಂಣಾತಿಕ ಸೋಂಕು ರಾಜ್ಯದಲ್ಲಿಯೂ ಕಾಣಿಸಿಕೊಂಡಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವುದು ಅವಶ್ಯವಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ರೋಗ ಹರಡುವ ಬೀತಿಯಿರುವುದರಿಂದ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸಲೂನ್ / ಬ್ಯೂಟಿ ಪಾರ್ಲರ್‌ಗಳನ್ನು ನಾಳೆಯಿಂದ ಮುಂದಿನ ಆದೇಶ ಬರುವವರೆಗೆ ತಾತ್ಕಾಲಿಕವಾಗಿ ಮುಚ್ಚುವಂತೆ ಮಂಗಳೂರು ಮಹಾನಗರ ಪಾಲಿಕೆ ಅಯುಕ್ತ ಅಜಿತ್ ಕುಮಾರ್ .ಎಸ್ ಆದೇಶ ಹೊರಡಿಸಿದ್ದಾರೆ.
Comments are closed.