ಕರಾವಳಿ

ನಿರ್ಬಂಧ ಉಲ್ಲಂಘನೆ : ಮಂಗಳೂರಿನಲ್ಲಿ ಎರಡು ದಿನಗಳಲ್ಲಿ 518 ವಾಹನ ಮುಟ್ಟುಗೋಲು

Pinterest LinkedIn Tumblr

ಮಂಗಳೂರು : ಕೊರೋನ ವೈರಸ್ ತಡೆಗಟ್ಟುವ ಸಲುವಾಗಿ ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್‌ ಆದೇಶ ಜಾರಿಯಲ್ಲಿದ್ದು, ದ.ಕ.ಜಿಲ್ಲಾದ್ಯಂತ ಸೆ.144 (3)ನ್ನು ವಿಧಿಸಲಾಗಿದೆ. ಆದರೂ ಲಾಕ್ ಡೌನ್ ಉಲ್ಲಂಘಿಸಿ ಬುಧವಾರ ಮತ್ತು ಶುಕ್ರವಾರ ವಾಹನ ಚಲಾಯಿಸಿದ ಹಲವು ಮಂದಿ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಸುಮಾರು 518 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಹಲವೆಡೆಗಳಲ್ಲಿ ಅನಗತ್ಯವಾಗಿ ಸಂಚರಿಸಿದ ಕಾರಣ ಕಾರು, ಆಟೋ, ಬೈಕ್ ಸಹಿತ ಹಲವು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಅಗತ್ಯ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ಕೊಂಡೊಯ್ಯವ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.

ಆದರೂ ಲಾಕ್ ಡೌನ್ ಉಲ್ಲಂಘಣೆ ಮಾಡಿದ 201 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಗುರುವಾರ ಮುಟ್ಟುಗೋಲು ಹಾಕಿದ್ದಾರೆ. ಬುಧವಾರ 317 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 518 ವಾಹನಗಳನ್ನು ಮುಟ್ಟುಗೋಲು ಹಾಕಿದಂತಾಗಿದೆ.

Comments are closed.