ಮಂಗಳೂರು, ಎಪ್ರಿಲ್.11 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೂಡ ಹೊಸ ಕೊರೋನ ಪ್ರಕರಣ ವರದಿಯಾಗಿಲ್ಲ. ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ವೈದ್ಯಕೀಯ ತಂಡವು ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಮುಂದುವರಿಸಿದ್ದು, ಇದುವರೆಗೆ ಯಾವೂದೇ ಕೊರೋನ ಪ್ರಕರಣ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 8 ಪರೀಕ್ಷಾ ವರದಿಗಳು ಆರೋಗ್ಯ ಇಲಾಖೆಯ ಕೈಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ.
ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಹೊಸ ಪ್ರಕರಣ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಮಾರ್ಚ್ 22ರ ಬಳಿಕ ಒಟ್ಟು 12 ಮಂದಿಯಲ್ಲಿ ಕೊರೋನ ದೃಢಪಟ್ಟಿತ್ತು. ಎಪ್ರಿಲ್ 4ರಂದು ಒಂದೇ ದಿನ ಜಿಲ್ಲೆಯಲ್ಲಿ ಮೂವರಿಗೆ ಪಾಸಿಟಿವ್ ಬಂದಿತ್ತು. ಆ ಬಳಿಕ ಈವರೆಗೆ ಪಾಸಿಟಿವ್ ದಾಖಲಾಗಿಲ್ಲ. ಇದು ದ.ಕ. ಜಿಲ್ಲೆಯ ಮಟ್ಟಿಗೆ ಸಮಾಧಾನಕರ ಸಂಗತಿಯಾಗಿದೆ.
Comments are closed.