ಕರಾವಳಿ

ಲಾಕ್‌ಡೌನ್ ಉಲ್ಲಂಘನೆ : ಮಂಗಳೂರು ಪೊಲೀಸರಿಂದ 265 ವಾಹನಗಳು ವಶಕ್ಕೆ

Pinterest LinkedIn Tumblr

ಮಂಗಳೂರು, ಎಪ್ರಿಲ್.17: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 265 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಗುರುವಾರ ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.

ಕೊರೋನ ವೈರಸ್ ತಡೆಗಟ್ಟುವ ಸಲುವಾಗಿ ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್‌ ಆದೇಶ ಜಾರಿಯಲ್ಲಿದ್ದು, ದ.ಕ.ಜಿಲ್ಲಾದ್ಯಂತ ಸೆ.144 (3)ನ್ನು ವಿಧಿಸಲಾಗಿದೆ. ಆದರೂ ಲಾಕ್ ಡೌನ್ ಉಲ್ಲಂಘಿಸಿ ಗುರುವಾರ ವಾಹನ ಚಲಾಯಿಸಿದ ಹಲವಾರು ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ಗುರುವಾರ ನಿಯಮ ಉಲ್ಲಂಘನೆ ಮಾಡಿದ 178 ದ್ವಿಚಕ್ರ ವಾಹನ, 12 ತ್ರಿಚಕ್ರ ವಾಹನ, 75 ನಾಲ್ಕು ಚಕ್ರಗಳ ವಾಹನ ಸಹಿತ ಒಟ್ಟು 256 ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಕೇಸು ದಾಖಲಿಸಲಾಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಹಲವೆಡೆಗಳಲ್ಲಿ ಅನಗತ್ಯವಾಗಿ ಸಂಚರಿಸಿದ ಕಾರಣ ಕಾರು, ರಿಕ್ಷಾ, ಬೈಕ್ ಸಹಿತ ಹಲವು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ನಿರ್ದೇಶನದಂತೆ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮತ್ತು ಸಂಚಾರ ವಿಭಾಗದ ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Comments are closed.