ಮಂಗಳೂರು, ಎಪ್ರಿಲ್.23 : ಈಗಾಗಾಲೇ ಸಿಲ್‌ಡೌನ್ ಮಾಡಲಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಬಂಟ್ವಾಳದ ಮಹಿಳೆಯೋರ್ವರಲ್ಲಿ ಕೊರೋನ ವೈರಸ್ ಸೋಂಕು ಇಂದು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸುಮಾರು 75 ವರ್ಷ ವಯಸ್ಸಿನ ಈ ಮಹಿಳೆ ಎ. 22ರಂದು ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಗಂಟಲು ದ್ರವ ಪರೀಕ್ಷೆಯಿಂದ ಕೊರೋನ ಸೋಂಕು ಇರುವುದು ದೃಢಪಟ್ಟಿರುತ್ತದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕೊರೋನ ಸೋಂಕು ದೃಢಪಟ್ಟಿರುವ ಈ ಮಹಿಳೆ ಎ. 19ರಂದು ಕೊರೋನ ವೈರಸ್ ಗೆ ಬಲಿಯಾದ ಬಂಟ್ವಾಳದ ಮಹಿಳೆಯ (ಅತ್ತೆ) ಸಂಬಂಧಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ಸುಮಾರು 75 ವರ್ಷ ವಯಸ್ಸಿನ ಈ ಮಹಿಳೆ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಎಪ್ರಿಲ್ 18ರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಎ. 22ರಂದು ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಇದೀಗ ಅವರ ಗಂಟಲು ದ್ರವ ಪರೀಕ್ಷೆಯಿಂದ ಕೊರೋನ ಸೋಂಕು ಇರುವುದು ದೃಢಪಟ್ಟಿರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ. 75 ವರ್ಷದ ವೃದ್ದೆಗೂ ಕೊರೊನಾ ಸೋಂಕು ತಗುಲಿರುವುದರಿಂದ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.ಈ ಪೈಕಿ 12 ಮಂದಿ ಗುಣಮುಖ ರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರಿಯ 4 ಪ್ರಕರಣಗಳಿವೆ.
Comments are closed.