ಮಂಗಳೂರು , ಮೇ.09: ದ.ಕ.ಜಿಲ್ಲೆಯಿಂದ ಉತ್ತರ ಭಾರತ ಸೇರಿದಂತೆ ಹೊರರಾಜ್ಯಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ರೈಲು ಪ್ರಯಾಣ ಇಂದಿನಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
ಈಗಾಗಲೇ ಸೇವಾ ಸಿಂಧು ಆನ್ ಲೈನ್ ನಲ್ಲಿ ನೋಂದಣಿ ಮಾಡಿರುವ ಕಾರ್ಮಿಕರಿಗೆ ಅಗತ್ಯ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಎಲ್ಲರನ್ನೂ ಅವರ ರಾಜ್ಯಗಳಿಗೆ ಕಳುಹಿಸಲು ರೈಲು ವ್ಯವಸ್ಥೆ ಮಾಡಲಾಗಿದೆ.
ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಸ್ವತಃ ರೈಲು ನಿಲ್ದಾಣ ಕಡೆಗೆ ಬಂದು ಜಮಾಯಿಸುವ ಅಗತ್ಯವಿಲ್ಲ. ಪ್ರಯಾಣಕ್ಕೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Comments are closed.