ಉಡುಪಿ: ಒಳನಾಡು ಜಲಸಾರಿಗೆ ,ಬಂದರು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರದಂದು ಬೈಂದೂರು ವ್ಯಾಪ್ತಿಯ ವಿವಿಧ ಕ್ವಾರಂಟೈನ್ ಕೇಂದ್ರ ಹಾಗೂ ಮುಂಬೈ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ತಪಾಸಣೆ ನಡೆಸುತ್ತಿರುವ ಶಿರೂರು ಗಡಿಭಾಗಕ್ಕೆ ಭೇಟಿ ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿ ಸುಮಾರು ನಾಲ್ಕುವರೆ ಸಾವಿರಕ್ಕೂ ಅಧಿಕ ಜನರು ಹೊರಜಿಲ್ಲೆಯಿಂದ ಆಗಮಿಸಿದ್ದಾರೆ.ನೂರಕ್ಕೂ ಅಧಿಕ ಕ್ವಾರಂಟೈನ್ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆರಂಭದಲ್ಲಿ ಸಣ್ಣಪುಟ್ಟ ತೊಂದರೆ ಹೊರತುಪಡಿಸಿದರೆ ಉತ್ತಮ ವ್ಯವಸ್ಥೆ ಇದೆ.ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ದೇವಸ್ಥಾನಗಳಿಗೆ ಭಕ್ತರಿಗೆ ಭೇಟಿಯ ಅವಕಾಶ ನೀಡಿಲ್ಲ.ಕೊರೊನೊ ನಿಯಂತ್ರಣದಲ್ಲಿ ಪ್ರತಿಯೊಬ್ಬರ ಜವಬ್ದಾರಿಯಿದೆ.ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ಕೆ. ರಾಜು, ಜಿ.ಪಂ.ಸದಸ್ಯರಾದ ಬಾಬು ಶೆಟ್ಟಿ, ಸುರೇಶ ಬಟ್ವಾಡಿ, ತಾ.ಪಂ.ಸದಸ್ಯ ಮಹೇಂದ್ರ ಪೂಜಾರಿ,ಪುಷ್ಪರಾಜ ಶೆಟ್ಟಿ, ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್ ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.
Comments are closed.