ಮಂಗಳೂರು, ಮೇ 27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 11 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟವರಲ್ಲಿ 10 ಮಂದಿ ಮಹಾರಾಷ್ಟ್ರ ಹಾಗೂ ಒಬ್ಬರು ಗುಜರಾತ್ ರಾಜ್ಯದಿಂದ ಬಂದವರು ಎಂದು ರಾಜ್ಯ ಆರೋಗ್ಯ ಇಲಾಖೆಯ ಬೆಳಗ್ಗಿನ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಈ ಪೈಕಿ 3, 11, ವರ್ಷದ ಮಕ್ಕಳಿಗೂ ಸೋಂಕು ತಗುಲಿದೆ. ಇದಲ್ಲದೆ 36, 59,17, 45, 37 ಮಹಿಳೆ ಹಾಗೂ 35, 46, 39 ವರ್ಷದ ಪುರುಷರಲ್ಲಿ ಸೋಂಕು ದೃಢವಾಗಿದ್ದು ಇವರೆಲ್ಲರೂ ಪುತ್ತೂರು , ಬೆಳ್ತಂಗಡಿ ಹಾಗೂ ಉಳ್ಳಾಲದ ಕ್ವಾರೆಂಟೈನ್ ಗೆ ಒಳಪಡಿಸಲಾಗಿತ್ತು. ಇವರೆಲ್ಲರನ್ನೂ ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮುಂಬೈ ಕೊರೋನಾ ಶಾಕ್
ಪ್ರಮುಖ ಅಂಶಗಳು :
ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಇಂದು ಕೊರೋನಾ ಪಾಸಿಟಿವ್
7 ಮಂದಿ ಮಹಿಳೆಯರು 4 ಮಂದಿ ಪುರುಷರಿಗೆ ಸೋಂಕು
ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ನಲ್ಲಿದ್ದರು
ಸ್ವಾಬ್ ಟೆಸ್ಟ್ ವರದಿಯಲ್ಲಿ ಕೊರೋನಾ ಸೋಂಕು ಪತ್ತೆ
ಸೋಂಕಿತರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲು
Comments are closed.